ಕೊಲಂಬೋ : ರವಿವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಟಿ20 ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಾ ?
ಶ್ರೀಲಂಕಾದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಪಂದ್ಯ ಆರಂಭವಾಗುವ ಎರಡು ಗಂಟೆ ಮೊದಲು ಅಂದರೆ ಸಂಜೆ 5:00 ಸುಮಾರಿಗೆ ಮಳೆಯ ಸಾಧ್ಯತೆ ಇದೆ. ಆದರೂ ಸಹ ಕೋಲಂಬೋದಲ್ಲಿ ಪಂದ್ಯದ ವೇಳೆ ಮಳೆ ಬರುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಒಟ್ಟಾರೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳು ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದ ರೋಚಕತೆ ಸವಿಯಲು ಅಣಿಯಾಗಿದ್ದು ಮಳೆ ಅಡ್ಡಿಪಡಿಸದೇ ಇದ್ದರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಜೊತೆಗೆ ಈ ಪಂದ್ಯ ವಿಶ್ವ ಕ್ರಿಕೆಟ್ ಜಗತ್ತಿನಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಗಮನ ಸೆಳೆದಿದ್ದು ಐಸಿಸಿಗೆ ಅತ್ಯಂತ ದೊಡ್ಡ ಮಟ್ಟದಲ್ಲಿ ಲಾಭ ತಂದು ಕೊಡಲಿದೆ. ಹೀಗಾಗಿ ಎಲ್ಲರ ಚಿತ್ತ ಈಗ ಈ ಪಂದ್ಯದ ಮೇಲೆ ನೆಟ್ಟಿದೆ.


