ಖಾನಾಪುರ: ಪಟ್ಟಣ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಿದರು.
ವಿಕಲಚೇತನರಿಗೆ ಮೂರು ಚಕ್ರಗಳ ಮೋಟರ್ ಸೈಕಲ್ ಗಳನ್ನು ವಿತರಿಸಿದರು ಮಹಿಳೆಯರಿಗೆ ಹೊಲಿಗೆ ಯಂತ್ರ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಠ್ಠಲ ಹಲಗೇಕರ, ಸರಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಮುಖ್ಯ ಉದ್ದೇಶ ಎನ್ನುವುದು ಸಮಾಜದ ಕಟ್ಟ ಕಡೆಯ ಜನರನ್ನು ಮುಖ್ಯ ವಾಹಿನಿಗೆ ತರುವುದಾಗಿದೆ. ವಿಕಲಚೇತನರು, ಮಹಿಳೆಯರು ಮತ್ತು ವಿದ್ಯಾರ್ಥಿಗಳು ಈ ಆಧುನಿಕ ತಂತ್ರಜ್ಞಾನದ ಮೂಲಕ ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.


