ಕಾರ್ಕಳ: ‘ಮೊದಲ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಕೊಡಬಾರದು ಎಂದು ನಿರ್ಣಯವನ್ನು ತೆಗೆದು ಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾರ್ಕಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೊದಲ ಬಾರಿಗೆ ಶಾಸಕರಾದವರು ಸಚಿವರಾಗಬೇಕು ಎಂದು ಕೇಳುವುದ ರಲ್ಲಿ ತಪ್ಪಿಲ್ಲ’ ಎಂದು ಪ್ರತಿಕ್ರಿಯಿಸಿದರು.
ಆಗುಂಬೆಯಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಪರಿಸರವಾದಿಗಳಿಂದ ವಿರೋಧ ಕುರಿತ ಪ್ರಶ್ನೆಗೆ, ‘ಯಾವ ಕಾರಣಕ್ಕೆ ವಿರೋಧ ಎಂದು ತಿಳಿದುಕೊಳ್ಳುತ್ತೇವೆ. ಚರ್ಚಿಸಿ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ’ ಎಂದು ಹೇಳಿದರು.
‘ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಸುಮ್ಮನೆ ಬಿಡುವುದಿಲ್ಲ’ ಎಂದು, ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾಲಯಕ್ಕೆ ಎಬಿವಿಪಿ ಕಾರ್ಯಕರ್ತರು ನುಗ್ಗಿದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.


