ಬೆಂಗಳೂರು : ನರೇಗಾಕ್ಕೆ ಕೇಂದ್ರ ಸರಕಾರ ಜಿ-ರಾಮ್-ಜಿ ಹೆಸರು ಇಟ್ಟಿರುವುದನ್ನು ತೀವ್ರವಾಗಿ ಆಕ್ಷೇಪಿಸುತ್ತ ಬಂದಿರುವ ರಾಜ್ಯ ಸರ್ಕಾರ ಇದೀಗ ಗಾಂಧಿ ಹೆಸರನ್ನು
ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿಗಳಿಗೆ’ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ನಾಮಕರಣ ಮಾಡಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬಜೆಟ್ ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.


