ಬೆಳಗಾವಿ : ಬಹು ಚರ್ಚೆಗೆ ಗ್ರಾಸವಾಗಿರುವ ಬೆಳಗಾವಿ ಮೇಯರ್, ಉಪ ಮೇಯರ್ ಚುನಾವಣೆ ಮಾ.18ಕ್ಕೆ ಜರುಗಲಿದ್ದು ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಮೀಸಲಾಗಿಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ರತ್ನಪ್ರಭಾ ಬೆಲ್ಲದ ಒತ್ತಾಯಿಸಿದ್ದಾರೆ.
ಮೇಯರ್ ಹುದ್ದೆ ಸಾಮಾನ್ಯ ಮಹಿಳೆ, ಉಪ ಮೇಯರ್ ಸಾಮಾನ್ಯ ವರ್ಗಕ್ಕೆ ಸೇರಿದ್ದು ವೀರಶೈವ ಲಿಂಗಾಯತ ಸಮುದಾಯ ಅಭ್ಯರ್ಥಿಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಬಹು ಮುಖ್ಯವಾಗಿದೆ. ಈ ಸಮುದಾಯವನ್ನು ಕಡೆಗಣಿಸದೆ ಮೇಯರ್ ಹುದ್ದೆಗೆ ಸಮುದಾಯದ ಅಭ್ಯರ್ಥಿಯನ್ನೇ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.


