ಬೆಳಗಾವಿ: ಬೆಳಗಾವಿ ಸೇರಿದಂತೆ ಜಿಲ್ಲೆಯ ಕೆಲವೆಡೆ ಮಂಗಳವಾರ ಭಾರಿ ಮಳೆ ಸುರಿದಿದೆ. ಇದರಿಂದ ಸಾಕಷ್ಟು ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮನೆಯ ಗೋಡೆ ಕುಸಿದು ಪತ್ನಿ ಮೃತಪಟ್ಟಿದ್ದು, ಪತಿ ಸ್ವಲ್ಪದರಲ್ಲೇ ಪಾರಾದ ಘಟನೆ ಹೊಸೂರ ಗ್ರಾಮದಲ್ಲಿ ನಡೆದಿದೆ.
ವಂಟಮೂರಿ ಗ್ರಾಮದ ಪರ್ವಿನ್ ಬೇಪಾರಿ(34) ಮೃತ ಮಹಿಳೆ. ಶರೀಫ ಬೇಪಾರಿ ಪಾರಾಗಿದ್ದಾರೆ.
ಕೋಳಿಗಳನ್ನು ಮಾರಾಟ ಮಾಡಲು ಬೈಕ್ ಮೇಲೆ ಹೊರಟಿದ್ದ ದಂಪತಿ, ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಪಾಳು ಮನೆ ಕೆಳಗೆ ನಿಂತಿದ್ದರು. ಈ ವೇಳೆ ಏಕಾಏಕಿ ಗೋಡೆ ಕುಸಿದು ಸ್ಥಳದಲ್ಲೇ ಪರ್ವಿನ್ ಮೃತಪಟ್ಟಿದ್ದಾರೆ. ಕಾಕತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


