ಬೆಳಗಾವಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಜಿಲ್ಲಾ ಘಟಕ, ಬೆಳಗಾವಿ ಮತ್ತು ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ, ಜಿಲ್ಲಾ ಘಟಕ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಹಾಲ್ ನಲ್ಲಿ ಶನಿವಾರ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆ ಗಮನಿಸಿ ಚಚಡಿ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕಿ ದೀಪಿಕಾ ಹಾಲಪ್ಪನವರ ಅವರಿಗೆ ಜಿಲ್ಲಾ ಮಟ್ಟದ “ವಿದ್ಯಾ ವಾರಿಧಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಡಿ.ಡಿ.ಪಿ.ಐ. ಲೀಲಾವತಿ ಹಿರೇಮಠ, ಬೆಳಗಾವಿ ಮೇಯರ್ ಪ್ರೀತಿ ಕಾಮಕರ, ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಜಿಲ್ಲಾ ಅಧ್ಯಕ್ಷ ಜಯಕುಮಾರ ಹೆಬ್ಬಳಿ, ಪ್ರಧಾನ ಕಾರ್ಯದರ್ಶಿ ರಮೇಶ ಗೋಣಿ, ಶಿಕ್ಷಕರ ಸಂಘದ ಎಂ.ಎಫ್. ಸಿದ್ದನಗೌಡರ, ಮಲ್ಲಿಕಾರ್ಜುನ ಕೋಳಿ ಒಳಗೊಂಡಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಸಂಘದ ಪಧಾಧಿಕಾರಿಗಳು, ಜಿಲ್ಲೆಯ ಶಿಕ್ಷಕರು ಉಪಸ್ಥಿತರಿದ್ದರು.


