ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣ ಗೊಂಡಿದ್ದು, ಶಿಕ್ಷಣ ಇಲಾಖೆ ಪ್ರಕಟಿಸಿರುವ ಸಂಭಾವ್ಯ ದಿನಾಂಕ ಏ.7ಕ್ಕೆ ಫಲಿತಾಂಶ ಹೊರಬರುವ ಸಾಧ್ಯತೆ ಇದೆ. ಫೆ.28ರಿಂದ ಮಾ.17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು, ಮಾ.20ರಿಂದ ಮೌಲ್ಯಮಾಪನ ಆರಂಭವಾಗಿತ್ತು.


