ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನಗೆ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ಮಂಗಳವಾರ ದೂರು ನೀಡಿದ್ದಾರೆ.
ಈ ಬಗ್ಗೆ ಆಯೋಗವು ಬೆಂಗಳೂರು ದಕ್ಷಿಣ ವಿಭಾಗ ಉಪ ಪೊಲೀಸ್ ಆಯುಕ್ತರು ಹಾಗೂ ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ಪತ್ರ ಬರೆದಿದ್ದಾರೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನ್ನ ಖಾಸಗಿ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬ್ಲಾಕ್ಮೇಲ್ ಮಾಡುತ್ತಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಸ್ವಾಮೀಜಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.
ಪ್ರಕರಣವನ್ನು ಪರಿಶೀಲಿಸಿ, ಸಂತ್ರಸ್ತೆಗೆ ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದೆ.


