ಬೆಂಗಳೂರು :
2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟವಾಗಿದೆ. ವಿದ್ಯಾರ್ಥಿಗಳು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪರಿಶೀಲಿಸಬಹುದು. ಇನ್ನು, ಪ್ರತಿ ವರ್ಷದಂತೆ ಈ ವರ್ಷವೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.
2026ರ ಪಿಯು ಫಲಿತಾಂಶದಲ್ಲಿಯೂ ಎಂದಿನಂತೆ ಕರಾವಳಿಯ ಜಿಲ್ಲೆಗಳು ಈಗಲೂ ಮುಂಚೂಣಿಯಲ್ಲಿವೆ. ಅದರಂತೆ, ಈ ಬಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮತ್ತೆ ಮುಂಚೂಣಿಯಲ್ಲಿ ಅತ್ಯಧಿಕ ಪಾಸ್ ಪ್ರಮಾಣ ದಾಖಲಿಸಿವೆ. ಇದೇ ವೇಳೆ, ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳೂ ಸಹ ಈ ಬಾರಿ ಉತ್ತಮ ಸಾಧನೆ ತೋರಿವೆ.
ಪ್ರತಿ ವರ್ಷದಂತೆ ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
* *ವಿಜ್ಞಾನ (Science):* ಶೇ. 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅಗ್ರಸ್ಥಾನದಲ್ಲಿದೆ.
* *ವಾಣಿಜ್ಯ (Commerce):* ಸರಾಸರಿ ಶೇ. 80 ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ.
* *ಕಲಾ (Arts):* ಶೇ. 75 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.
2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಬಾರಿ ಹೆಚ್ಚಳವಾಗಿದೆ. ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ತಲಾ 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.
ಈ ಬಾರಿ ಪರೀಕ್ಷೆ ಕುಳಿತ ಪರೀಕ್ಷೆಗೆ ಕುಳಿತ 7,10,363 ವಿದ್ಯಾರ್ಥಿಗಳ ಪೈಕಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.86ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.
ಫಲಿತಾಂಶವನ್ನು karresults.nic.in ಅಥವಾ Karnataka one ಮೊಬೈಲ್ ಆ್ಯಪ್ ಮೂಲಕ ಪಡೆಯಬಹುದು. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಳಿಯೇ ವಾಟ್ಸ್ಯಾಪ್ ಅಥವಾ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಿದೆ. ಡಿಜಿ ಲಾಕರ್ನಲ್ಲಿ ಅಂಕಪಟ್ಟಿಯನ್ನು ಪಡೆಯಲು ಅವಕಾಶ ಕಲ್ಪಿಸಿದೆ.


