ಬೆಂಗಳೂರು: 2025-26ನೇ ಸಾಲಿನ ಪಿಯುಸಿ ಫಲಿತಾಂಶ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಶೇಕಡಾ 86.48 ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಫಲಿತಾಂಶದಲ್ಲಿ ಉಡುಪಿ ಜಿಲ್ಲೆ 96.39 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉಡುಪಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ದ್ವಿತೀಯ ಸ್ಥಾನ, ಕೊಡಗು ಮೂರನೇ ಸ್ಥಾನ, ವಿಜಯಪುರ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದು, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ ಎಂದರು.
88.70 ಪ್ರತಿಶತ ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಈ ಸಲವು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.83.65 ಬಾಲಕರು ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗ 72.86, ವಾಣಿಜ್ಯ ಶೇ.88.04 ಫಲಿತಾಂಶ, ವಿಜ್ಞಾನ ವಿಭಾಗದಲ್ಲಿ 91.69ಶೇ ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವರು ಹೇಳಿದರು.


