ಖಾನಾಪುರ : ಖಾನಾಪುರ ತಾಲೂಕಿನ ನಗುರ್ಡಾ ವಾಡಾ ಗ್ರಾಮದ ಮುಖ್ಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ವಿಠ್ಠಲ ಹಲಗೇಕರ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪ್ರಮುಖರು, ಹಿರಿಯರು, ಯುವಕರು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.
ಗ್ರಾಮದ ಸಮಗ್ರ ಅಭಿವೃದ್ಧಿಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದ್ದು, ಸ್ಥಳೀಯರಿಗೆ ಉತ್ತಮ ರಸ್ತೆ ಸೌಲಭ್ಯ ದೊರೆಯುವ ಮೂಲಕ ಸಂಚಾರ ಸುಗಮವಾಗಲಿದೆ.


