ಬೆಳಗಾವಿ: ಯರಗಟ್ಟಿ ತಾಲೂಕಿನ ಶ್ರೀರಂಗಪುರ-ಮದ್ಲೂರ ಗ್ರಾಮದಲ್ಲಿ ಬಸವ ಜಯಂತಿ ನಿಮಿತ್ತ ಏ.21ರಂದು ಬೆಳಗ್ಗೆ 10.30ಕ್ಕೆ ಬಸವೇಶ್ವರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುರುಗೋಡ ಮಹಾಂತ ದುರದುಂಡೀಶ್ವರ ಮಠದ ಶ್ರೀ ನೀಲಕಂಠ ಮಹಾಸ್ವಾಮೀಜಿ ಪುತ್ಥಳಿ ಅನಾವರಣಗೊಳಿಸುವರು. ಮುನವಳ್ಳಿ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮೀಜಿ, ಅಂಕಲಗಿ-ಕುಂದರಗಿ ಅಡವಿವಸಿದ್ದೇಶ್ವರ ಮಠದ ಡಾ.ಅಮರಸಿದ್ದೇಶ್ವರ ಮಹಾಸ್ವಾಮೀಜಿ, ಗೊರವನಕೊಳ್ಳ ಬ್ರಹ್ಮಾನಂದ ಆಶ್ರಮದ ಶಿವಾನಂದ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಇಂಚಗೇರಿ ಮಠದ ಶ್ರೀ ಪ್ರಭೂಜಿ ಮಹಾರಾಜರು, ಯರಗಟ್ಟಿ ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರಯ ಸಾನ್ನಿಧ್ಯ ವಹಿಸುವರು. ಶಾಸಕ ವಿಶ್ವಾಸ ವೈದ್ಯ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ಶ್ರೀಶೈಲ ಕಾಜಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


