ಖಾನಾಪುರ : ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಶಿವ ಬಸವ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಸಮಾಜ ಸುಧಾರಕ, ಕ್ರಾಂತಿಕಾರಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರ ತತ್ವ ಆದರ್ಶಗಳನ್ನು ಸ್ಮರಿಸಲಾಯಿತು.
ಬಸವಣ್ಣನವರ ‘ಕಾಯಕವೇ ಕೈಲಾಸ’ ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮುಖಂಡರು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಬಸವರಾಜ ಸಾಣಿಕೊಪ್ಪ,
ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಮಾರಿಹಾಳ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಚೇತನ್ ಮನೇರಿಕರ, ಜಿಲ್ಲಾ ಉಪಾಧ್ಯಕ್ಷ ಸಂಜಯ ಕುಬಲ್, ಅಪ್ಪಯ್ಯ ಕಡೋಳಿ, ನಾಗೇಶ್ ಸಾವಂತ, ರವಿ ಪಾಟೀಲ, ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.


