ಬೆಳಗಾವಿ : ಕಲ್ಲು ಗಣಿಗಾರಿಕೆ ವೇಳೆ ಸಂಭವಿಸಿದ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತ ಘಟನೆ ಮಂಗಳವಾರ ಸಂಭವಿಸಿದೆ.
ರವಿಕುಮಾರ್(18) ಹಾಗೂ ಸುಭಾಷ್ ಸಿಂಗ್ (18)ಮೃತ ದುರ್ದೈವಿಗಳು.
ಕಲ್ಯಾಣ ಶೆಟ್ಟಿ ಅಸೋಸಿಯೇಷನ್ ಗೆ ಸೇರಿದ ಗಣಿಗಾರಿಕೆ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕದ ಸಮೀಪ ಹಿಟಾಚಿ ಜೆಸಿಬಿ ಮೂಲಕ ಕೆಲಸ ಮಾಡುತ್ತಿದ್ದಾಗ ಯಂತ್ರದ ಬಕೆಟಿಗೆ ಅಕಸ್ಮಾತ್ತಾಗಿ ವಿದ್ಯುತ್ ತಗುಲುತ್ತಿದ್ದಂತೆ ಪ್ರಾಣ ಉಳಿಸಿಕೊಳ್ಳಲು ಜಿಗಿದ ಕಾರ್ಮಿಕರು ನೀರಿಗೆ ಬಿದ್ದಿದ್ದಾರೆ. ನೀರಿನಲ್ಲಿ ಸಹ ವಿದ್ಯುತ್ ಹರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


