ಹುಬ್ಬಳ್ಳಿ :
ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇದರಿಂದ ದಕ್ಷಿಣ ಭಾರತದ ಪ್ರಥಮ ವಿಧಿವಿಜ್ಞಾನ ವಿಶ್ವವಿದ್ಯಾಲಯ ಈ ಭಾಗದಲ್ಲಿ ಸ್ಥಾಪಿತವಾಗುವುದು ಖಚಿತವಾದಂತಾಗಿದೆ. ಈ ಬಗ್ಗೆ ಎರಡು ಮೂರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದು ಕ್ಯಾಂಪ್ ಸ್ಥಾಪನೆ ಬಗ್ಗೆ ಮನವರಿಕೆ ಮಾಡಲಾಗಿತ್ತು. ಗೃಹ ಸಚಿವ ಅಮಿತ್ ಶಾ ಅವರ ಜೊತೆ ಚರ್ಚೆಯನ್ನು ನಡೆಸಿದ್ದೆ. ಇದರಿಂದಾಗಿ ಮಹಾನಗರಕ್ಕೆ ಉನ್ನತ ಶಿಕ್ಷಣ ಸಂಸ್ಥೆ ದೊರೆಯುತ್ತಿದೆ. ದಕ್ಷಿಣ ಭಾರತದಲ್ಲಿ ಅದರಲ್ಲೂ ಹುಬ್ಬಳ್ಳಿ-ಧಾರವಾಡ ನಗರಕ್ಕೆ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸಿಕ್ಕಿರುವುದು ಸಂತಸ ಸುದ್ದಿ ಎಂದು ಅವರು ತಿಳಿಸಿದ್ದಾರೆ.