ಬೆಳಗಾವಿ :
ಅರ್ಥಶಾಸ್ತ್ರ ಸಂಘಗಳು ವಿದ್ಯಾರ್ಥಿಗಳಲ್ಲಿ ಸ್ವ ಉದ್ಯೋಗ, ಆರ್ಥಿಕ ಸ್ವಾವಲಂಬನೆ ಮತ್ತು ನಿರ್ವಹಣೆ ಮೂಡಿಸುತ್ತದೆ ಎಂದು ರಕ್ಷಣಾ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಸಾರ್ವಜನಿಕ ಸಂಪರ್ಕ ವಿಭಾಗದ ಮಾಜಿ ಮುಖ್ಯಸ್ಥ ಡಾ.ಜಯಪ್ರಕಾಶ ರಾವ್ ಹೇಳಿದರು.
ಸ್ಥಳಿಯ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಅರ್ಥಶಾಸ್ತ್ರ ಸಂಘ ಉದ್ಘಾಟಿಸಿ ಮಾತನಾಡಿದರು.
ಅರ್ಥಶಾಸ್ತ್ರ ಸಂಘ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿಗಳನ್ನು ಮೂಡಿಸುವುದು ಹಾಗೂ ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಎಚ್.ಎಸ್. ಮೇಲಿನಮನಿ ಮಾತನಾಡಿ, ಅರ್ಥಶಾಸ್ತ್ರ ಸಂಘವು ವಿದ್ಯಾರ್ಥಿಗಳಲ್ಲಿ ದೈನಂದಿನ ಬದುಕಿನಲ್ಲಿ ಅರ್ಥಶಾಸ್ತ್ರದ ಪ್ರಾಯೋಗಿಕ ಅರಿವು ಮೂಡಿಸುವುದು ಹಾಗೂ ಸಾರ್ವಜನಿಕ ಭಾಷಣ ಕಲೆ ಹಾಗೂ ಸಂವಹನ ಕೌಶಲಗಳನ್ನು ಅಭಿವೃದ್ಧಿ ಪಡಿಸುವುದು ಎಂದು ಹೇಳಿದರು.
ಅರ್ಥಶಾಸ್ತ್ರ ಸಂಘದ ಚಟುವಟಿಕೆಗಳನ್ನು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ಹಜಗೋಳಕರ, ಡಾ.ವಿಶ್ವನಾಥ ಖೋತ, ಡಾ.ನಂದನ ಕಟಾಂಬಳೆ, ಡಾ.ಮಹಾಂತೇಶ ಸೊಗಲ ಹಾಗೂ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಕೀರ್ತಿ ಕಡಕೋಳ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕಿ ಸೌಮ್ಯ ಹಟ್ಟಿ ಸ್ವಾಗತಿಸಿದರು. ಸಾಯಿ ಪಾಟೀಲ ವಂದಿಸಿದರು. ಕುಲ್ಸುಮ್ ದಖಾನಿ ನಿರೂಪಿಸಿದರು.