ಬೆಂಗಳೂರು :
ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ 8(ಜಿ)ನಲ್ಲಿ ಬರುವ ಹಡಪದ ಜಾತಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈಗ ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಲು ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಆದೇಶ ಹೊರಡಿಸಿದೆ.
ನಿಗಮ ಸ್ಥಾಪನೆ ಮಾಡಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಹಡಪದ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ್ದಾರೆ.