ನಿಪ್ಪಾಣಿ :
ನಿಪ್ಪಾಣಿ ತಾಲೂಕಿನ ಬೋರಗಾಂವ ಶ್ರೀ ಗಣೇಶ ಟೆಕ್ಸ್ ಟೈಲ್ ನಲ್ಲಿ ಶನಿವಾರ ನಸುಕಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಯಂತ್ರೋಪಕರಣ ಹಾಗೂ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸದಲಗಾ ಪೊಲೀಸರು ಹಾಗೂ ಅಗ್ನಿಶಾಮಕದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. 9 ಪವರ್ ಮಷೀನ್ ಮತ್ತು ಕಚ್ಚಾ ಮಟೀರಿಯಲ್ ಸೇರಿದಂತೆ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.