ಬೆಂಗಳೂರು :
ಧಾರವಾಡದಲ್ಲಿ ಕೆಲ ವರ್ಷಗಳ ಹಿಂದೆ ಐಐಟಿ ಸ್ಥಾಪನೆಯಾಗಿತ್ತು. ಇದೀಗ ಮತ್ತೊಂದು ಐಐಟಿ ಕರ್ನಾಟಕಕ್ಕೆ ಸಿಗುತ್ತದಾ ?
ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಜನಿಸಿದ ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆ ಮಾಡಲು ಮುಂದಿನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಐಐಟಿ ಸ್ಥಾಪನೆ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಲಾಗುವುದು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಅವರಿಂದ ಇದಕ್ಕೆ ಶಿಫಾರಸು ಕೊಡಿಸಲಾಗುವುದು ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ.