ಬೆಳಗಾವಿ :
ಗುರುವಾರ ಫೆಬ್ರವರಿ 16 ರಂದು
ಮೌಲ್ಯ ಶಿಕ್ಷಣದ ಅಗತ್ಯ ಹಾಗೂ ಮಹತ್ವದ ಕುರಿತು ಜನಜಾಗೃತಿ ಮೂಡಿಸುವುದಕ್ಕಾಗಿ ಸಂಪೂರ್ಣ ಕರ್ನಾಟಕ ರಾಜ್ಯ ಏಕಾಂಗಿ ಬೈಕ್ ಯಾತ್ರೆ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ವಿವೇಕ ವಿದ್ಯಾ ವಾಹಿನಿ ಟ್ರಸ್ಟ್ನ ಸಂಸ್ಥಾಪಕ ನಿತ್ಯಾನಂದ ವಿವೇಕವಂಶಿ ಬೆಳಗಾವಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಖಾನಾಪುರ ನಲ್ಲಿ ಸ್ವಾಗತ ಮಾಡಿಕೊಳ್ಳಲಾಗುತ್ತದೆ.
ಬೆಳಗ್ಗೆ 10:15 ಕ್ಕೆ ಬೆಳಗಾವಿಯ ಪೀರನವಾಡಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಬಳಿ ಸ್ವಾಗತ ಮಾಡಿಕೊಳ್ಳಲಾಗುವುದು.
ಬೆಳಗ್ಗೆ 11 ಗಂಟೆಗೆ ಬೆಳಗಾವಿ ಭರತೇಶ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಮೌಲ್ಯ ಶಿಕ್ಷಣದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮಧ್ಯಾಹ್ನ 12 ಗಂಟೆಗೆ ಬೆಳಗಾವಿ ಕೋಟೆಯಲ್ಲಿರುವ ರಾಮಕೃಷ್ಣ ಮಿಷನ್ ಆಶ್ರಮಕ್ಕೆ ಭೇಟಿ, ಮಧ್ಯಾಹ್ನ 1 ಗಂಟೆಗೆ ಚಿಕ್ಕೋಡಿಗೆ ಯಾತ್ರೆ ಹೊರಡುತ್ತದೆ ಎಂದು ಪ್ರಕಟಣೆ ತಿಳಿಸಿದೆ.