ಬೆಂಗಳೂರು :
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ರಾಜ್ಯ ಸರಕಾರದ ಪರಿಶಿಷ್ಟ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ಬೆಂಗಳೂರಿನಲ್ಲಿ ಇಂದು ನಡೆಸಿದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.