ಬೆಂಗಳೂರು :
ಲಂಚ ಸ್ವೀಕಾರ ಪ್ರಕರಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಚನ್ನಗಿರಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.
ಜಾಮೀನು ಅರ್ಜಿ ವಜಾಗೊಂಡ ಬಳಿಕ ಶಾಸಕರು ನಾಪತ್ತೆಯಾಗಿದ್ದರು. ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಚನ್ನೇಶಪುರದ ಅವರ ನಿವಾಸಕ್ಕೆ ದಾಂಗುಡಿ ಇಟ್ಟಿದ್ದರು . ಬೆಂಗಳೂರಿನ ಮನೆ ಮತ್ತು ಕಚೇರಿಯಲ್ಲಿ ಎಂಟು ಕೋಟಿ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿತ್ತು .