ಬೆಂಗಳೂರು :
ಮುಂದಿನ ಎರಡು ತಿಂಗಳ ಒಳಗೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಬಗ್ಗೆ ಚುನಾವಣಾ ಆಯೋಗ ಇದೀಗ ಬಿರುಸಿನ ಪ್ರಕ್ರಿಯೆ ನಡೆಸುತ್ತಿದೆ.
ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸುಳಿವು ನೀಡಿದೆ . ಈ ಬಗ್ಗೆ ಮನವಿ ಬಂದಿದ್ದು , ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ . ಚುನಾವಣೆ ಅಕ್ರಮ ತಡೆಯಲು ಬಿಗಿ ಕ್ರಮ ಕೈಗೊಳ್ಳಲಾಗಿದ್ದು , ATM ವಹಿವಾಟಿನ ಮೇಲೆ ನಿಗಾ ಇಡಲಾಗಿದೆ . ಮತದಾರರ ಸೆಳೆಯಲು ನೀಡುವ ಗಿಫ್ಟ್ಗಳಿಗೆ ಬ್ರೇಕ್ ಹಾಕಲಾಗಿದೆ . ಅಕ್ರಮಗಳ ಬಗ್ಗೆ ಸಿ – ವಿಸಿಲ್ ಆ್ಯಪ್ಗೆ ದೂರು ನೀಡಿ ಎಂದು ಆಯುಕ್ತರು ಮನವಿ ಮಾಡಿದ್ದಾರೆ .
ದಶಕಗಳ ಹಿಂದೆ ರಾಜ್ಯದಲ್ಲಿ ಎರಡು ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿತ್ತು. ಆದರೆ ಈ ಬಾರಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಒಂದೇ ಬಾರಿ ಇಡೀ ರಾಜ್ಯದಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸುತ್ತಿದೆ.