ಬೆಳಗಾವಿ :
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮಾರ್ಚ್ 20 ರಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಚ್ 16 ರಂದು ಬೆಳಗಾವಿಗೆ ಬರುತ್ತಿದ್ದು ಮಹತ್ವದ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 10:55 ಕ್ಕೆ ಬೆಳಗಾವಿಗೆ ಆಗಮಿಸುವ ಅವರು ಇಡೀ ದಿನ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ನಡೆಸಲಿದ್ದಾರೆ. ಮುಂದಿನ ಸೋಮವಾರ ರಾಹುಲ್ ಗಾಂಧಿ ಅವರು ಬೆಳಗಾವಿಗೆ ಆಗಮಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣೆಯ ರಣಕಹಳೆ ಮೊಳಗಿಸಲಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಕರ್ನಾಟಕ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆ ಕಾಲಕ್ಕೆ ರಾಹುಲ್ ಗಾಂಧಿ ಅವರು ಇನ್ನು ಮುಂದೆ ಮೇಲಿಂದ ಮೇಲೆ ಕರ್ನಾಟಕ ಪ್ರವಾಸ ಕೈಗೊಂಡು ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಮಾರ್ಗದರ್ಶನ ಮಾಡಿ ನವೋತ್ಸಾಹ ತುಂಬಲಿದ್ದಾರೆ. ಹೀಗಾಗಿ ರಾಹುಲ್ ಗಾಂಧಿಯವರ ಕಾರ್ಯಕ್ರಮ ಕರ್ನಾಟಕ ವಿಧಾನಸಭಾ ಚುನಾವಣೆ ಕಾರಣಕ್ಕೆ ವಿಶೇಷವಾದ ಮಹತ್ವ ಪಡೆದುಕೊಂಡಿದೆ.