ಬೆಳಗಾವಿ :
ಮಾರ್ಚ್ 20 ರಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮೂರರಿಂದ ನಾಲ್ಕು ಲಕ್ಷ ಜನ ಆಗಮಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬೃಹತ್ ಕಾರ್ಯಕ್ರಮಕ್ಕೆ ಮೂರರಿಂದ ನಾಲ್ಕು ಲಕ್ಷ ಜನ ಸೇರಲಿದ್ದಾರೆ. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಚುನಾವಣೆ ಸಂದೇಶ ನೀಡುವ ಪ್ರಯತ್ನವನ್ನು ರಾಹುಲ್ ಗಾಂಧಿಯವರು ಮಾಡಲಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.