ಬೆಂಗಳೂರು :
ರಾಣೆಬೆನ್ನೂರು ವಿಧಾನಸಭಾ ಮತಕ್ಷೇತ್ರದಲ್ಲಿ ಟಿಕೆಟ್ ವಂಚಿತಗೊಂಡಿರುವ ಹಿನ್ನೆಲೆಯಲ್ಲಿ ಆರ್.ಶಂಕರ್ ಇಂದು ಬಿಜೆಪಿ ಮತ್ತು ವಿಧಾನ ಪರಿಷತ್ತು ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಪಕ್ಷೇತರರಾಗಿ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
2018 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆಲುವು ಸಾಧಿಸಿದ್ದ ಆರ್. ಶಂಕರ್ ನಂತರದ ಬೆಳವಣಿಗೆಗಳಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಉಪಚುನಾವಣೆ ಸಂದರ್ಭದಲ್ಲಿ ಅರುಣ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಆರ್. ಶಂಕರ್ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಮತ್ತೆ ಕಣಕ್ಕಿಳಿಯಲು ಬಯಸಿದ್ದ ಆರ್. ಶಂಕರ್ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಇದರಿಂದ ನೊಂದಿರುವ ಅವರು ಇಂದು ವಿಧಾನಪರಿಷತ್ತಿಗೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.