ಬೆಳಗಾವಿ :
ವಿಧಾನ ಪರಿಷತ್ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡಲು ಬೆಂಗಳೂರಿನತ್ತ ಹೊರಟ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ
ಬೆಳಗ್ಗೆಯೇ ಕಂಡುಬಂದರು.
ಕಾಂಗ್ರೆಸ್ ಹಾಲಿ ಎಂಎಲ್ಸಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ ವಿಮಾನ ನಿಲ್ದಾಣದಲ್ಲಿ ಸವದಿ ಅವರೊಂದಿಗೆ ಕುಶಲೋಪರಿ ವಿಚಾರಿಸಿದರು.
ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಣ್ ಸವದಿ ಅವರಿಗೆ ಪಕ್ಷ ಈ ಬಾರಿ ಟಿಕೆಟ್ ನಿರಾಕರಿಸಿದೆ. ಇದರಿಂದ ತೀವ್ರವಾಗಿ ನೊಂದಿರುವ ಲಕ್ಷ್ಮಣ ಸವದಿ ಅವರ ಬೆಂಬಲಿಗರು ಸಭೆ ನಡೆಸಿ ಬಿಜೆಪಿಗೆ ರಾಜೀನಾಮೆ ನೀಡಲು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಅವರು ಇಂದು ಬೆಂಗಳೂರಿಗೆ ತೆರಳಿ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಭಾರೀ ಶಾಕ್ ನೀಡಲು ಮುಂದಾಗಿದ್ದಾರೆ.