ಕೊಪ್ಪಳ :
ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಂಸದ ಕರಡಿ ಸಂಗಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಜೆಡಿಎಸ್ ಸೇರಿ ವಿಧಾನಸಭಾ ಚುನಾವಣೆಗೆ ಅವರು ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ.
ಬೆಳಗ್ಗೆ 10:30ಕ್ಕೆ ಬೆಂಬಲಿಗರ ಸಭೆ ಕರೆದಿರುವ ಅವರು ಸಭೆಯ ನಂತರ ರಾಜೀನಾಮೆ ನೀಡುವ ಘೋಷಣೆ ಮಾಡಲಿದ್ದಾರೆ. ಸಭೆ ನಂತರ ದೆಹಲಿಗೆ ತೆರಳಿ ಲೋಕಸಭಾ ಸ್ಪೀಕರ್ ಹಾಗೂ ಬಿಜೆಪಿಗೆ ರಾಜೀನಾಮೆ ಸಲ್ಲಿಸಿ ಏಪ್ರಿಲ್ 19 ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.