ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಬೆಳಗ್ಗೆ 8:15ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ ಸುರ್ಜೇವಾಲಾ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನಂತರ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.