ನವದೆಹಲಿ :
ಕರ್ನಾಟಕ ವಿಧಾನಸಭೆ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಳೆದ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.
ಇತರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ . 2 ಕ್ಷೇತ್ರಗಳ ಟಿಕೆಟ್ ಅನ್ನು ( ಶಿವಮೊಗ್ಗ ನಗರ ಹಾಗೂ ಮಾನ್ವಿ ) ಬಿಜೆಪಿ ಬಾಕಿ ಉಳಿಸಿಕೊಂಡಿದೆ . ಈಶ್ವರಪ್ಪ ಪುತ್ರನಿಗೆ ಇನ್ನೂ ಸಿಕ್ಕಿಲ್ಲ ಟಿಕೆಟ್ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ . ಜತೆಗೆ ಮಾನ್ವಿ ಕ್ಷೇತ್ರದ ಟಿಕೆಟ್ ಅನ್ನೂ ಬಾಕಿ ಇರಿಸಿಕೊಂಡಿದೆ . ಶಿವಮೊಗ್ಗ ನಗರ ಕ್ಷೇತ್ರವನ್ನು ಈವರೆಗೆ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದರು . ಇತ್ತೀಚೆಗಷ್ಟೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ . ಆದರೆ , ತಮ್ಮ ಮಗ ಕಾಂತೇಶ್ಗೆ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಕೊನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್ ?
ಕ್ಷೇತ್ರ – ಅಭ್ಯರ್ಥಿ
1. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
2. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಉಮೇಶ್ ಶೆಟ್ಟಿ
3. ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್ –
4. ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
5. ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
6. ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
7. ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ
8. ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
9 ರೋಣ- ಕಳಕಪ ಬಂಡಿ
10. ಮಹದೇವಪುರ – ಮಂಜುಳಾ ಲಿಂಬಾವಳಿ
56 ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು . 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು . ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು . ಆರು ಮಂದಿ ಹಾಲಿ ಶಾಸಕರಿಗೆ ಎರಡನೇ ಪಟ್ಟಿಯಲ್ಲಿ ಅವಕಾಶ ನೀಡಿರಲಿಲ್ಲ . ಇದೀಗ ಮೂರನೇ ಪಟ್ಟಿಯಲ್ಲಿ 10 ಮಂದಿಗೆ ಟಿಕೆಟ್ ನೀಡುವುದರೊಂದಿಗೆ ಒಟ್ಟು 222 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ .