ಬೆಳಗಾವಿ :
ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದಾರೆ.
ಅಥಣಿ ವಿಧಾನಸಭಾ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂಪತ್ ಕುಮಾರ್ ಶೆಟ್ಟಿ ಅವರ ನಾಮಪತ್ರ ಸಲ್ಲಿಕೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದು ಬೆಳಗ್ಗೆ 11ಕ್ಕೆ ಶ್ರೀ ಶಿವಾಜಿ ವೃತ್ತದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆ ಆರಂಭವಾಗಲಿದೆ.