ಮೈಸೂರು :
ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಂಬದ ಮೂರನೇ ತಲೆಮಾರು ಇದೀಗ ರಾಜಕೀಯ ಪ್ರವೇಶ ಮಾಡುವ ಹಾದಿಯಲ್ಲಿದೆ.
ರಾಕೇಶ್ ಅವರ ಪುತ್ರ ಧವನ್ ರಾಜಕೀಯ ತರಬೇತಿಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರಿಗೂ ರಾಜಕೀಯದಲ್ಲಿ ಬಹಳ ಆಸಕ್ತಿ ಇತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಧವನ್ ಗೆ ರಾಜಕೀಯದಲ್ಲಿ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನು ತಿಳಿದುಕೊಳ್ಳಲು ಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ. ಆತನಿಗೆ ಇನ್ನೂ 17 ವರ್ಷ. ರಾಜಕೀಯಕ್ಕೆ ಬರಲು ಇನ್ನೂ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನು ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯದಲ್ಲಿ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನಿಗೆ ಇಷ್ಟಪಟ್ಟು ಬಂದರೆ ಬರಲಿ ಎಂದು ತಿಳಿಸಿದ್ದಾರೆ.