ಬೆಂಗಳೂರು :
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ ತಿಂಗಳ ಕೊನೆಯೊಳಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿರುವುದಾಗಿ ವರದಿಯಾಗಿದೆ. ಏಪ್ರಿಲ್ ತಿಂಗಳ ಕೊನೆಯೊಳಗೆ ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ ಮಂಡಳಿ ಸಿದ್ಧತೆ ನಡೆಸಿರುವುದಾಗಿ ವರದಿಯಾಗಿದೆ. ಮೌಲ್ಯಮಾಪನ ಕಾರ್ಯ ಬಹುತೇಕ ಮುಗಿದಿದೆ. ಏಪ್ರಿಲ್ ಕೊನೆಯೊಳಗೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಈ ಮೊದಲು ಎಂದು ಶಿಕ್ಷಣ ಸಚಿವರು ಹೇಳಿದ್ದರು. ಇಲಾಖೆ ಮೂಲಗಳ ಪ್ರಕಾರ ಏಪ್ರಿಲ್ 25 ಅಥವಾ ನಂತರದ ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು ದಿನಾಂಕ ಮತ್ತು ಸಮಯದ ಬಗ್ಗೆ ಅಧಿಕಾರಿಗಳು ಶೀಘ್ರ ಮಾಹಿತಿ ನೀಡಲಿದ್ದಾರೆ.