ಕನಕಪುರ :
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರವಾಗುವ ಆತಂಕದ ಹಿನ್ನೆಲೆಯಲ್ಲಿ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಇಲ್ಲಿ ಬಿಜೆಪಿಯಿಂದ ಆರ್. ಅಶೋಕ್ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಹಲವು ಪ್ರಕರಣಗಳ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರಗೊಂಡರೆ ಮುನ್ನೆಚ್ಚರಿಕೆ ಕ್ರಮವಾಗಿ ಡಿ.ಕೆ. ಸುರೇಶ್ ಅಭ್ಯರ್ಥಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ.