ಬೆಂಗಳೂರು :
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಆದಷ್ಟು ಬೇಗ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಮೌಲ್ಯ ಮಾಪನ ಸೋಮವಾರದಿಂದ ಆರಂಭವಾಗಲಿದೆ. ಈ ಬಗ್ಗೆ ಶಿಕ್ಷಕರಿಗೆ ಆದೇಶ ಕಳಿಸಲಾಗಿದೆ. ಎರಡನೇ ವಾರ ಚುನಾವಣೆ ಫಲಿತಾಂಶಕ್ಕೆ ತೊಂದರೆ ಆಗದಂತೆ ಪಿಯುಸಿ ಫಲಿತಾಂಶವನ್ನು ಕೇವಲ 23 ದಿನದೊಳಗೆ ಪ್ರಕಟಿಸಿದಂತೆ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಸಹ ಪ್ರಕಟಿಸಲಾಗುವುದು ಎಂದು ಮಂಡಳಿ ಅಧ್ಯಕ್ಷ ರಾಮಚಂದ್ರನ್ ತಿಳಿಸಿದ್ದಾರೆ.
ಮಾರ್ಚ್ 30ರಿಂದ ಏಪ್ರಿಲ್ 15ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಿತು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. ಮೌಲ್ಯಮಾಪನದಲ್ಲಿ 73 ಸಾವಿರಕ್ಕೂ ಹೆಚ್ಚು ಶಿಕ್ಷಕರು ಪಾಲ್ಗೊಳ್ಳುತ್ತಾರೆ.
ಮೌಲ್ಯಮಾಪನ ಮುಗಿದ ನಂತರ ಶೀಘ್ರ ಫಲಿತಾಂಶದ ಬಗ್ಗೆ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ಅಧ್ಯಕ್ಷ ರಾಮಚಂದ್ರನ್ ತಿಳಿಸಿದ್ದಾರೆ.