ಕೊಪ್ಪಳ :ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಏಪ್ರೀಲ್ 24 ರಂದು 12 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ತಿಳಿಸಿದ್ದಾರೆ.
ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ್ದ 81 ಅಭ್ಯರ್ಥಿಗಳ ಪೈಕಿ 12 ಜನರು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದು, 69 ಅಭ್ಯರ್ಥಿಗಳು ಚುನಾವಣಾ ಅಂತಿಮ ಕಣದಲ್ಲಿದ್ದಾರೆ.
ಕ್ಷೇತ್ರವಾರು ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ: 60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 17 ಅಭ್ಯರ್ಥಿಗಳಲ್ಲಿ ಇಬ್ಬರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 15 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ., 61-ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 15 ಅಭ್ಯರ್ಥಿಗಳಲ್ಲಿ ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 12 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
62-ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 21 ಅಭ್ಯರ್ಥಿಗಳಲ್ಲಿ ಇಬ್ಬರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 19 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ., 63-ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 14 ಅಭ್ಯರ್ಥಿಗಳಲ್ಲಿ ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 11 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ., 64-ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 14 ಅಭ್ಯರ್ಥಿಗಳಲ್ಲಿ ಇಬ್ಬರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 12 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ: ಉಮೇದುವಾರಿಕೆ ಹಿಂಪಡೆದ ಅಭ್ಯರ್ಥಿಗಳು: ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಏಪ್ರೀಲ್ 24 ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ತುಕಾರಮ ಸೂರ್ವೆ ಹಾಗೂ ಮಹಮ್ಮದ ನಜೀರುದ್ದೀನ್ ಮೂಲಿಮನಿ ಎಂಬುವವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ., 61-ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ರಮೇಶ ಕೋಟಿ, ಕಲ್ಯಾಣಂ ನಾಗರಾಜ ಹಾಗೂ ಬಸವರಾಜ ಮ್ಯಾಗಳಮನಿ ಎಂಬುವವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ., 62-ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮನೋಹರ ಹಾಗೂ ಭಾಗ್ಯವಂತ ಎಂಬುವವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ., 63-ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದಲಿಂಗ, ರವಿತೇಜ ಅಧಿಕಾರಿ ಹಾಗೂ ಹನುಮೇಶ ಎಂಬುವವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ., 64-ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸಾಲಿಮಠ ಹಾಗೂ ಮೂರ್ತೆಪ್ಪ ಗಿಣಿಗೇರಿ ಎಂಬುವವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.