ಬೆಳಗಾವಿ :
ರಾಮದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಹಾದಿ ಸುಗಮವಾಗಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿ ಚಿಕ್ಕ ರೇವಣ್ಣ ಅವರನ್ನು ವಿರೋಧಿಸಿ ನಾಮಪತ್ರ ಸಲ್ಲಿಸಿದ್ದ ಐವರು ಕೊನೆಗೂ ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ರಾಮದುರ್ಗದ ಹಾಲಿ ಶಾಸಕ ಮಹದೇವಪ್ಪ ಯಾದವಾಡ, ಮಲ್ಲಣ್ಣ ಯಾದವಾಡ, ಪಿ.ಎಫ್. ಪಾಟೀಲ ಮುಂತಾದವರು ಕೊನೆಗೂ ನಾಮಪತ್ರ ಹಿಂಪಡೆಯುವ ನಿರ್ಧಾರ ಮಾಡಿದ್ದಾರೆ. ಇದರಿಂದಾಗಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ತಲೆನೋವು ತುಸು ಕಡಿಮೆಯಾದಂತಾಗಿದೆ.