ಬೆಂಗಳೂರು :
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು 2023-24ರ ಶೈಕ್ಷಣಿಕ ಸಾಲಿನಲ್ಲಿ ಮೇ 29ರಿಂದ ಪ್ರಾರಂಭವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಈ ಕುರಿತು ಸುತ್ತೋಲೆ ಹೊರಡಿಸಿದೆ. ರಾಜ್ಯ ಪಠ್ಯಕ್ರಮದ ಸರಕಾರಿ ಅನುದಾನಿತ ಮತ್ತು ಅನುದಾನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಏಕರೂಪದ ಶೈಕ್ಷಣಿಕ ಚಟುವಟಿಕೆ ನಡೆಸುವಂತೆ ಸೂಚಿಸಲಾಗಿದೆ. ಮೊದಲ ಅವಧಿ ಮೇ 29 ರಿಂದ ಅಕ್ಟೋಬರ್ 7 ರವರೆಗೆ ಇರಲಿದೆ. ಅಕ್ಟೋಬರ್ 8 ರಿಂದ ಅಕ್ಟೋಬರ್ 24ರ ವರೆಗೆ ದಸರಾ ರಜೆ ಇರಲಿದೆ. ಎರಡನೇ ಅವಧಿ ಅಕ್ಟೋಬರ್ 25 ರಿಂದ 2024ರ ಏಪ್ರಿಲ್ 10 ರವರೆಗೆ ಇರಲಿದೆ. ಏಪ್ರಿಲ್ 11 ರಿಂದ ಬೇಸಿಗೆ ರಜೆ ಪ್ರಾರಂಭವಾಗಲಿದೆ. ಮೇ 28ರ ವರೆಗೆ ರಜೆ ಮುಂದುವರಿಯಲಿದೆ ಎಂದು ತಿಳಿಸಿದೆ.