ಬೆಂಗಳೂರು :
ಕರ್ನಾಟಕ ಚುನಾವಣೆಯನ್ನು ಬಿಜೆಪಿ ಆತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಪ್ರಧಾನಿ ನರೇಂದ್ರ ಮೋದಿ 20 ಹೆಚ್ಚು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಹಿಂದುತ್ವದ
ಫೈರ್ ಬಾಂಡ್ ಎಂದೇ ಖ್ಯಾತರಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರಣಿ ರ್ಯಾಲಿಗೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದೆ. ಈಗಾಗಲೇ ಹಲವು ಭಾಗಗಳಲ್ಲಿ ರ್ಯಾಲಿಗಳನ್ನು ನಡೆಸಿರುವ ಬಿಜೆಪಿ ಪ್ರಧಾನಿ ಮೋದಿ ಅವರನ್ನು ಕರೆತಂದು ಚುನಾವಣೆ ವೇಳೆ ಹೆಚ್ಚು ಸಮಾವೇಶ ನಡೆಸುವ ಸಾಧ್ಯತೆ ಇದೆ. ಅವರೊಂದಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರನ್ನು ಕರೆತಂದು ಕರ್ನಾಟಕದಲ್ಲಿ ಬಿಜೆಪಿ ಕಹಳೆಯೂದಲು ಮುಂದಾಗಿದೆ.