ಮೈಸೂರು :ಚುನಾವಣೆ ಹೊಸ್ತಿಲಲ್ಲೇ ತಂದೆ ತಾಯಿಗಳನ್ನು ಕಳೆದುಕೊಂಡು ಅಭ್ಯರ್ಥಿ ಒಬ್ಬರು ಅನಾಥರಾಗಿದ್ದಾರೆ.ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಆರ್.ಧ್ರುವನಾರಾಯಣ ಅವರ ಪತ್ನಿ, ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರ ತಾಯಿ ವೀಣಾ (54) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ದರ್ಶನ್ ಸೇರಿದಂತೆ ಇಬ್ಬರು ಪುತ್ರರಿದ್ದಾರೆ.ವಿಜಯನಗರದ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಸಂಜೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.