ಬೆಂಗಳೂರು :
ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಯಸಿದರೆ ಮುಖ್ಯಮಂತ್ರಿ ಸ್ಥಾನ ಬಿಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಚುನಾವಣೆಗೂ ಮುನ್ನ ಸಿಎಂ ಘೋಷಣೆ ಮಾಡುವುದಿಲ್ಲ. ಖರ್ಗೆ ಅವರಿಗೆ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಪ್ರಕ್ರಿಯೆ ಇದೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಗುರಿ. ನಂತರ ಶಾಸಕರ ಅಭಿಪ್ರಾಯ ಪರಿಗಣಿಸಿ ಸಿಎಂ ನಿರ್ಧಾರ ಮಾಡಲಾಗುವುದು ಎಂದು ಅವರು ಕೆಪಿಸಿಸಿ ಕಚೇರಿಯಲ್ಲಿ ಹೇಳಿಕೆ ನೀಡಿದ್ದಾರೆ.