ಚಿತ್ರದುರ್ಗ:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ಘಟನೆ ತಾಲ್ಲೂಕಿನ ಜಾಲಿಕಟ್ಟೆಯಲ್ಲಿ ನಡೆದಿದೆ.
ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗ್ರಾಮಕ್ಕೆ ಸೋಮವಾರ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ಪಾವತಿ ಸಂಗ್ರಹಕ್ಕೆ ಸಿದ್ದಾಪುರ ಗ್ರಾಮ ಪಂಚಾಯತಿಯ ಗ್ರಾಮ ವಿದ್ಯುತ್ ಪ್ರತಿನಿಧಿಯೊಬ್ಬರು ತೆರಳಿದ್ದಾರೆ. ಈ ವೇಳೆ ಗ್ರಾಮಸ್ಥರು ‘ವಿದ್ಯುತ್ ಉಚಿತ ಎಂದು ಘೋಷಿಸಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆ ಕಾರಣಕ್ಕೆ ನಾವು ಹಣ ಪಾವತಿಸುವುದಿಲ್ಲ’ ಎಂದು ತಿಳಿಸಿದ್ದಾರೆ.
ಆದೇಶ ಬರುವವರೆಗೂ ಹಣ ಪಾವತಿಸಬೇಕೆಂದು ಗ್ರಾಮ ವಿದ್ಯುತ್ ಪ್ರತಿನಿಧಿ ವಿವರಿಸಿದ್ದಾರೆ. ಮಾತಿಗೆ ಜಗ್ಗದ ಗ್ರಾಮಸ್ಥರು ‘ಆದೇಶದ ಬಗ್ಗೆ ಕಾಂಗ್ರೆಸ್ ನವರಿಗೇ ಕೇಳಿ ಎಂದು ಹೇಳಿದ್ದಾರೆ.