ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆಶಿ ಆಯ್ಕೆ
ಬೆಂಗಳೂರು :
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿ ಮುಖ್ಯಮಂತ್ರಿ ಪಟ್ಟ ಲಭಿಸಿದೆ. ಮೇ 18ರ ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಅಧಿಕೃತ ಘೋಷಣೆ ಆಗಲಿದೆ. ಬುಧವಾರ ಮಧ್ಯರಾತ್ರಿ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಮೇ 20ರ ಶನಿವಾರ ಮಧ್ಯಾಹ್ನ 12:30ಕ್ಕೆ ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.