ಬೆಂಗಳೂರು :
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜಭವನದಲ್ಲಿ ಗುರುವಾರ ರಾಜ್ಯಪಾಲ ಥಾವರಚಂದ್ ಗೆಹಲೊಟ್ ಅವರನ್ನು ಭೇಟಿ ಮಾಡಿ ನೂತನ ಸರಕಾರದ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಪಕ್ಷದ ಹಕ್ಕು ಪ್ರತಿಪಾದಿಸಿದರು. ನಾಯಕರಾದ ಬಿ ಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಸಲೀಮ್ ಅಹ್ಮದ್ ಮತ್ತಿತರರು ಇದ್ದರು.