ಬೆಳಗಾವಿ :ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ಜೊತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಮಾತುಕತೆಗೆ ಮುಂದಾಗಿದ್ದಾರೆ. ಮಂಗಳವಾರ ರಾತ್ರಿ ಬೆಳಗಾವಿಗೆ ಆಗಮಿಸಲಿರುವ ಶಿವಕುಮಾರ್ ಅವರು ಲಕ್ಷ್ಮಣ ಸವದಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿಗೆ ತೆರಳಿ ಜಗದೀಶ್ ಶೆಟ್ಟರ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಖಚಿತ ಮೂಲಗಳ ಪ್ರಕಾರ ಲಕ್ಷ್ಮಣ ಸವದಿ ಅವರಿಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಸ್ಥಾನ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ. ಈ ಕುರಿತು ಡಿಕೆ ಶಿವಕುಮಾರ್ ಉಭಯ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.