ಬೆಂಗಳೂರಿಗೆ ಆನಂದ ಮಾಮನಿ ; ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ 

ಬೆಂಗಳೂರಿಗೆ ಆನಂದ ಮಾಮನಿ ; ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ 
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಬೆಂಗಳೂರು :
ಅನಾರೋಗ್ಯಕ್ಕೆ ತುತ್ತಾಗಿದ್ದ ವಿಧಾನಸಭಾ ಉಪಾಧ್ಯಕ್ಷ ಮತ್ತು ಸವದತ್ತಿ ಮತಕ್ಷೇತ್ರದ ಶಾಸಕ ಆನಂದ ಮಾಮನಿ ಅವರು ಇದೀಗ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಗುಣಮುಖರಾಗುವ ಸಾಧ್ಯತೆ ಇದೆ.

ಈ ಮೊದಲು ಅವರು ನಾಲ್ಕೈದು ದಿನಗಳ ಕಾಲ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಆನಂದ ಮಾಮನಿ ಅವರನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.