ಬೆಳಗಾವಿ-ಧಾರವಾಡ ರೈಲು ಮಾರ್ಗ ಶೀಘ್ರ ; ವಿಮಾನ ನಿಲ್ದಾಣವೂ ಮೇಲ್ದರ್ಜೆಗೆ

ಬೆಳಗಾವಿ-ಧಾರವಾಡ ರೈಲು ಮಾರ್ಗ ಶೀಘ್ರ ; ವಿಮಾನ ನಿಲ್ದಾಣವೂ ಮೇಲ್ದರ್ಜೆಗೆ
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಬೆಳಗಾವಿ :
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರ್ ರಾಷ್ಟ್ರೀಯ ದರ್ಜೆಗೆ ಮೇಲ್ದರ್ಜೆಗೇರಿಸಲು ಅಂದಾಜು ೧೦೦ ಎಕರೆ ಜಮೀನು ಅಗತ್ಯವಿದೆ. ಈ ಜಮೀನನ್ನು ಒದಗಿಸಲು ಸರಕಾರದ ವತಿಯಿಂದ ಕ್ರಮವನ್ನು ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

 ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ(ಆ.೧೬) ನಡೆದ ಜಿಲ್ಲೆಯ ವಿಮಾನ ನಿಲ್ದಾಣ, ರೈಲ್ವೆ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಅವಶ್ಯಕವಿರುವ ಸುತ್ತಮುತ್ತಲಿನ ಜಮೀನು ವ್ಯವಹಾರ ನಿರ್ಬಂಧಿಸಲು ಸೂಕ್ತ ಕ್ರಮ ವಹಿಸುವಂತೆ ಉಪ ವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದರಿಂದ ಮುಂಬರುವ ದಿನಗಳಲ್ಲಿ ವಿಮಾನ ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಜಮೀನು ಪಡೆಯಲು ಅನುಕೂಲವಾಗಲಿದೆ ಎಂದರು.

ಬೆಳಗಾವಿ-ಕಿತ್ತೂರು ರೈಲುಮಾರ್ಗ-ಭೂಸ್ವಾಧೀನ ಆರಂಭಿಸಲು ಸೂಚನೆ:

 ಬೆಳಗಾವಿ-ಕಿತ್ತೂರು ರೈಲುಮಾರ್ಗ ನಿರ್ಮಾಣ ಕ್ಕೆ ಅಗತ್ಯವಿರುವ ೬೦೦ ಎಕರೆ ಭೂಸ್ವಾಧೀನಕ್ಕೆ ಅಗತ್ಯವಿರುವ ಪ್ರಕ್ರಿಯೆಗಳನ್ನು ತಕ್ಷಣವೇ ಆರಂಭಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.
ಕೆ.ಐ.ಎ.ಡಿ.ಬಿ. ವತಿಯಿಂದ ಭೂಸ್ವಾಧೀನ ಅಧಿಸೂಚನೆ ಪ್ರಕಟಿಸಬೇಕು ಎಂದು ತಿಳಿಸಿದರು.
 ಮಂಡಳಿಯ ಸಿಇಓ ಜತೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ವಾರದೊಳಗೆ ಗೆಜೆಟ್ ಅಧಿಸೂಚನೆ ಪ್ರಕಟಿಸಲು ತಿಳಿಸಿದರು.

ಬಾಗಲಕೋಟೆ-ಕುಡಚಿ ರೈಲು ಮಾರ್ಗ:

 ಭೂಸ್ವಾಧೀನಕ್ಕೆ ಅಗತ್ಯವಿರುವ ೩೫ ಕೋಟಿ ರೂಪಾಯಿ ಅನುದಾನದ ಪ್ರಸ್ತಾವನೆಗೆ ತಕ್ಷಣವೇ ಮಂಜೂರಾತಿ ನೀಡಿ ಕಳಿಸಬೇಕು ಎಂದು ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೂ ಕೂಡ ದೂರವಾಣಿ ಮೂಲಕವೇ ನಿರ್ದೇಶನ ನೀಡಿದರು.

ರಾಷ್ಟ್ರೀಯ ಹೆದ್ದಾರಿ ೪ ಎ; ಕಾಮಗಾರಿ ಪೂರ್ಣಗೊಳಿಸಲು ಸೂಚನೆ:

 ರಾಷ್ಟ್ರೀಯ ಹೆದ್ದಾರಿ-೪ ಎ ಗೆ ಸಂಬಂಧಿಸಿದಂತೆ ಹೆಚ್ಚುವರಿ ಭೂಸ್ವಾಧೀನ ಪ್ರಕ್ರಿಯೆಯನ್ನು ಇದುವರೆಗೆ ಆರಂಭಿಸಿರುವುದಿಲ್ಲ. ಆದ್ದರಿಂದ ೫೦ ಹೆಕ್ಟೇರ್ ಭೂಸ್ವಾಧೀನಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಆರಂಭಿಸಬೇಕು ಎಂದು ಸೂಚನೆ ನೀಡಿದರು.
 ಒಂದು ವೇಳೆ ಹೆದ್ದಾರಿ ಅಲೈನ್ ಮೆಂಟ್ ಬದಲಾಗಿದ್ದರೆ ಮುಂಚೆ ಸ್ವಾಧೀನಪಡಿಸುಕೊಂಡಿರುವ ಜಮೀನು ಡಿನೋಟಿಫಿಕೇಶನ್ ಮಾಡಬೇಕು.
 ಸಾಧ್ಯವಾದರೆ ಆ ಜಮೀನು ಮೂಲ ಮಾಲೀಕರಿಗೆ ಹಿಂದಿರುಗಿಸಬೇಕು ಅಥವಾ ಹರಾಜು ಮಾಡಬೇಕು ಎಂದು ಸಲಹೆ ನೀಡಿದರು.

 ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಬಾಕಿ ಉಳಿದಿದ್ದರೆ ಹೆದ್ದಾರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕಾಮಗಾರಿ ಮುಂದುವರಿಸಬೇಕು ಎಂದು ಸಚಿವ ಕಾರಜೋಳ ಹೇಳಿದರು.

 ಬೆಳಗಾವಿ-ಸಂಕೇಶ್ಚರ ನಡುವಿನ ಚತುಷ್ಪಥವನ್ನು ಷಟ್ಪಥವನ್ನಾಗಿ ಪರಿವರ್ತಿಸುವ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಬಾರದು ಎಂದು ಸಚಿವರು ತಿಳಿಸಿದರು.

ಬೆಳಗಾವಿ-ಸಂಕೇಶ್ವರ ಮಧ್ಯೆದ ನಡುವಿನ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ತಕ್ಷಣ ಸರಿಪಡಿಸದಿದ್ದರೆ ಹೆದ್ದಾರಿ ಇಲಾಖೆಯ ಮಹಾ ನಿರ್ದೇಶಕರಿಗೆ ಪತ್ರ ಬರೆಯುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.


ರೈಲುಮಾರ್ಗ; ೬೦೦ ಎಕರೆ ಜಮೀನು ಅಗತ್ಯ:

ಬೆಳಗಾವಿ-ಕಿತ್ತೂರು ರೈಲುಮಾರ್ಗ ನಿರ್ಮಾಣಕ್ಕೆ ಅಗತ್ಯವಿರುವ ೬೦೦ ಎಕರೆ ಭೂಸ್ವಾಧೀನ ಅಗತ್ಯವಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ೪೪೪ ಎಕರೆ ಭೂಸ್ವಾಧೀನಕ್ಕೆ ಈಗಾಗಲೇ ನೋಟೀಸ್ ಜಾರಿ ಮಾಡಲಾಗಿದೆ. ೧೫೬ ಎಕರೆ ತಡೆಯಾಜ್ಞೆ ಇತ್ತು. ಇದೀಗ ತಡೆಯಾಜ್ಞೆ ತೆರವಾಗಿದೆ. ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಭೂಸ್ವಾಧೀನಕ್ಕೆ ಸಂಬAಧಿಸಿದ ಕಾನೂನು ತೊಡುಕು ನಿವಾರಣೆಯಾಗಿದೆ. 

ರಾಷ್ಟ್ರೀಯ ಹೆದ್ದಾರಿ ೪ಎ; ಹೆಚ್ಚುವರಿ ಭೂಸ್ವಾಧೀನಕ್ಕೆ ಸಲಹೆ:

 ರಾಷ್ಟ್ರೀಯ ಹೆದ್ದಾರಿ-೪ ಎ ಗೆ ಸಂಬಂಧಿಸಿ ಹೆಚ್ಚುವರಿ ಭೂಸ್ವಾಧೀನ ಪ್ರಕ್ರಿಯೆಯನ್ನು ಇದುವರೆಗೆ ಆರಂಭಿಸಿರುವುದಿಲ್ಲ. ಆದ್ದರಿಂದ ೫೦ ಹೆಕ್ಟೇರ್ ಭೂಸ್ವಾಧೀನಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
 ರಾಷ್ಟ್ರೀಯ ಹೆದ್ದಾರಿ-೪ ಎ ಗೆ ಕಾಮಗಾರಿಗಾಗಿ ಖಾನಾಪುರ ಬಳಿ ಹೆಚ್ಚುವರಿ ಜಮೀನು ಪಡೆದುಕೊಂಡಿದ್ದರೆ ಅದನ್ನು ಹಿಂದಿರುಗಿಸಬೇಕು ಇಲ್ಲದಿದ್ದರೆ ಪರಿಹಾರವನ್ನು ನೀಡಬೇಕು ಎಂದು ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ನಗರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-೪ಎ ಎರಡು ಕಡೆಯ ಸರ್ವಿಸ್ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥವನ್ನಾಗಿ ಪರಿವರ್ತಿಸಲು ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಈ ರಸ್ತೆಯು ವಿಮಾನನಿಲ್ದಾಣ ರಸ್ತೆಯನ್ನು ಸಂಪರ್ಕಿಸುವುದರಿAದ ಸರ್ವಿಸ್ ರಸ್ತೆಯನ್ನು ಚತುಷ್ಪಥವನ್ನಾಗಿ ಪರಿವರ್ತಿಸಬೇಕು ಎಂದರು.
 ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು ಕನಿಷ್ಠ ೧೦೦ ನೂರು ಎಕರೆ ಜಮೀನು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು ರಾಜ್ಯ ಸರಕಾರ ಪ್ರಸ್ತಾವನೆ ಸಲ್ಲಿಸಬೇಕು:

 ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಮಾತನಾಡಿ, ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತರ್ ರಾಷ್ಟ್ರೀಯ ಮೇಲ್ದರ್ಜೆಗೆ ಏರಿಸಲು ರಾಜ್ಯ ಸರಕಾರದಿಂದ ಪ್ರಸ್ತಾವನೆಯನ್ನು ಸಲ್ಲಿಸಬೇಕು.
ಪ್ರಸ್ತಾವನೆಯನ್ನು ಆಧರಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರಕ್ಕೆ ಬೇಡಿಕೆಯನ್ನು ಕಳಿಸಲಾಗುವುದು ಎಂದರು.

ಬೆಳಗಾವಿ-ಸಂಕೇಶ್ವರ ಹೆದ್ದಾರಿ ದುರಸ್ತಿಗೆ ಒತ್ತಾಯ:

 ಬೆಳಗಾವಿ-ಸಂಕೇಶ್ವರ ಮಧ್ಯೆದ ನಡುವಿನ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವಂತಾಗಿದೆ ಎಂದು ಶಾಸಕ ಅನಿಲ್ ಬೆನಕೆ ಸಭೆಯ ಗಮನಕ್ಕೆ ತಂದರು.
 ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಒತ್ತಾಯಿಸಿದರು.

ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಉಪ ವಿಭಾಗಾಧಿಕಾರಿ  ರವೀಂದ್ರ ಕರಲಿಂಗಣ್ಣವರ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿಯನ್ನು ಒದಗಿಸಿದರು.

 ಕೊನೆಯಲ್ಲಿ ಬಳ್ಳಾರಿ ನಾಲಾ ಸಮಸ್ಯೆ ಕುರಿತು ಸ್ಥಳೀಯ ರೈತರು ನೀಡಿದ ಮನವಿಯನ್ನು ಪರಿಶೀಲಿಸಿದ ಸಚಿವರು, ಈ ಕುರಿತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.