ಬೆಳಗಾವಿ ಜಿಲ್ಲಾಡಳಿತ ಕ್ರಮ ಖಂಡಿಸಿ ಆ. 2 ಕ್ಕೆ ಕಿತ್ತೂರು ಬಂದ್....!

ಬೆಳಗಾವಿ ಜಿಲ್ಲಾಡಳಿತ ಕ್ರಮ ಖಂಡಿಸಿ ಆ. 2 ಕ್ಕೆ ಕಿತ್ತೂರು ಬಂದ್....!
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಬೆಳಗಾವಿ ಜಿಲ್ಲಾಡಳಿತ ಮತ್ತೊಂದು ವಿವಾದಕ್ಕೆ ಆಸ್ಪದ ನೀಡಿದೆ. ರಾಣಿ ಚನ್ನಮ್ಮ ಅರಮನೆಯ ಪ್ರತಿರೂಪ ಕಟ್ಟಡ ನಿರ್ಮಾಣಕ್ಕೆ ಅಣಿಯಾಗಿದೆ.

ಕಿತ್ತೂರಲ್ಲಿರುವ ಕೋಟೆ ಪಕ್ಕವೇ ಅರಮನೆ ನಿರ್ಮಾಣದ ಬೇಡಿಕೆ ಇದ್ದರೂ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಅರಮನೆ ನಿರ್ಮಾಣಕ್ಕೆ ನಿರ್ಧಾರ ಮಾಡಿದೆ.

ಬಚ್ಚನಕೇರಿಯಲ್ಲಿ ಕೋಟೆಯ ಪ್ರತಿರೂಪ ಅರಮನೆ ನಿರ್ಮಾಣಕ್ಕೆ 57 ಎಕರೆ ಜಾಗ ಮೀಸಲಿಡಲು ನಿರ್ಧಾರ ಕೈಗೊಂಡಿದೆ.

ಅರಮನೆ ನಿರ್ಮಾಣಕ್ಕೆ ಸರ್ಕಾರಿ ಜಾಗ ಕಿತ್ತೂರು ಪ್ರಾಧಿಕಾರಕ್ಕೆ ನೀಡಲು ಉದ್ದೇಶಿಸಿರುವ ಸರ್ಕಾರ ಈ‌ ಸಂಬಂಧ ಜಿಲ್ಲಾಧಿಕಾರಿ ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಆಕ್ಷೇಪಗಳಿದ್ರೆ ಸಮರ್ಥನೀಯ ಕಾರಣ ನೀಡಲು ಪತ್ರದಲ್ಲಿ ಉಲ್ಲೇಖಲಾಗಿದೆ. ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಜಿಲ್ಲಾಡಳಿತ ಅವಕಾಶ ನೀಡಿದ್ದು, ಬಚ್ಚನಕೇರಿಯಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿರುವ ಜಿಲ್ಲಾಡಳಿತ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಕಿತ್ತೂರು ಬಂದ್ ಗೆ ಕರೆ ನೀಡಿದ ಹೋರಾಟಗಾರರು:

ಬಚ್ಚನಕೇರಿಯಲ್ಲಿ ಕಿತ್ತೂರು ಕೋಟೆಯ ಪ್ರತಿರೂಪ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಬೆಳಗಾವಿ ಜಿಲ್ಲಾಡಳಿತ ಕ್ರಮ ಖಂಡಿಸಿ ಆ. 2 ಕ್ಕೆ ಕಿತ್ತೂರು ಬಂದ್ ಕರೆ ನೀಡಲಾಗಿದೆ.

ಐತಿಹಾಸಿಕ ಕಿತ್ತೂರು ಕೋಟೆಯ ಪ್ರತಿರೂಪ ಅರಮನೆ ಪಟ್ಟಣದಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಆದೇಶ ಖಂಡಿಸಿ ಕಿತ್ತೂರು ಪಟ್ಟಣ ಬಂದ್ ಕರೆ ನೀಡಿದೆ.

ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿ ಪಂಚಾಕ್ಷರಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ನಿಚ್ಚಣಕಿಯ ಮಡಿವಾಳೇಶ್ವರ ಮಠದಿಂದ ಚನ್ನಮ್ಮ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

ಬಳಿಕ ಬೆಳಗಾವಿಗೆ ಆಗಮಿಸಿ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಅಧಿಕ ಜನರು ಸೇರುವಂತೆ ಸ್ವಾಮೀಜಿಗಳ ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.