ದಶರಥ ಅರೆಸ್ಟ್.... ಎಸಿಬಿ ಮಿಂಚಿನ ಕಾರ್ಯಾಚರಣೆ.... ಬೆಳಗಾವಿಯ ಮುಜರಾಯಿ ತಹಶೀಲದಾರ ಈತ ಮಾಡಿದ್ದೇನು?

ದಶರಥ ಅರೆಸ್ಟ್.... ಎಸಿಬಿ ಮಿಂಚಿನ ಕಾರ್ಯಾಚರಣೆ.... ಬೆಳಗಾವಿಯ ಮುಜರಾಯಿ ತಹಶೀಲದಾರ ಈತ ಮಾಡಿದ್ದೇನು?
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ.5 ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲದಾರ ಮತ್ತು ‌ಆತನ ಸಂಬಂಧಿಯನ್ನು ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ)ದ ಅಧಿಕಾರಿಗಳು ಮುಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

ಮುಜರಾಯಿ ತಹಶೀಲದಾರ ದಶರಥ ನಕುಲ ಜಾಧವ ಹಾಗೂ ಆತನ ಸಂಬಂಧಿ ಸಂತೋಷ ಕಡೋಲಕರ ಬಂಧಿತ ಆರೋಪಿಗಳು. 

ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಸ್ಕೀಂ ಅಡಿಯಲ್ಲಿ ರೂ.4 ಲಕ್ಷ ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ ಅವರು ರೂ.20 ಸಾವಿರ ಬೇಡಿಕೆ ಇಟ್ಟಿದ್ದರು.

ಲಂಚದ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಸುಭಾಷ ಗೋಡಕೆ ಎಂಬವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ತಹಶೀಲದಾರ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ಆತನ ಸಂಬಂಧಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲದಾರ ಜಾಧವ ಅವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಎಸಿಬಿ ಎಸ್ಪಿ ಬಿ. ಎಸ್.ನೇಮಗೌಡ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ‌ ನಡೆಸಿದರು.